ಕವಿ - ಕೆ.ಎಸ್.ನರಸಿಂಹಸ್ವಾಮಿ

ಹಾಡು ಕೇಳಿ
ನಿನ್ನೊಲುಮೆಯಿಂದಲೇ ಬಾಳು ಬೆಳಕಾಗಿರಲು
ಚಂದ್ರಮುಖಿ ನೀನೆನಲು ತಪ್ಪೇನೆ?
ನಿನ್ನ ಸೌಜನ್ಯವೇ ದಾರಿ ನೆರಳಾಗಿರಲು
ನಿತ್ಯ ಸುಖಿ ನೀನೆನಲು ಒಪ್ಪೇನೆ?
ನಿನ್ನ ನಗೆಮಲ್ಲಿಗೆಯ ಪರಿಮಳದ ಪಾತ್ರೆಯಲಿ
ಚೆಲ್ಲಿ ಸೂಸುವ ಅಮೃತ ನೀನೇನೆ
ನನ್ನ ಕನಸುಗಳೆಲ್ಲ ಕೈಗೊಳುವ ಯಾತ್ರೆಯಲಿ
ಸಿದ್ಧಿಸುವ ಧನ್ಯತೆಯು ನೀನೇನೆ
ನಿನ್ನ ಕಿರುನಗೆಯಿಂದ ನಗೆಯಿಂದ ನುಡಿಯಿಂದ
ಎತ್ತರದ ಮನೆ ನನ್ನ ಬದುಕೇನೆ
ಚಂದ್ರನಲಿ ಚಿತ್ರಿಸಿದ ಚೆಲುವಿನೊಳಗುಡಿಯಿಂದ
ಗಂಗೆ ಬಂದಳು ಇತ್ತ ಕಡೆಗೇನೆ
** ** ** ** ** ** **
ಹಾಡು ಕೇಳಿ
ನಿನ್ನ ಪ್ರೇಮದ ಪರಿಯ
ನಾನರಿಯೆ ಕನಕಾಂಗಿ
ನಿನ್ನೊಳಿದೆ ನನ್ನ ಮನಸು
ಹುಣ್ಣಿಮೆಯ ರಾತ್ರಿಯಲಿ
ಉಕ್ಕುವುದು ಕಡಲಾಗಿ
ನಿನ್ನೊಲುಮೆ ನನ್ನ ಕಂಡು
ನಿನ್ನೊಳಿದೆ ನನ್ನ ಮನಸು
ಸಾಗರನ ಹೃದಯದಲಿ
ರತ್ನಪರ್ವತ ಮಾಲೆ
ಮಿಂಚಿನಲಿ ಮೀವುದಂತೆ
ತೀರದಲಿ ಬಳಕುವಲೆ
ಕಣ್ಣ ಚುಂಬಿಸಿ ಮತ್ತೆ
ಸಾಗುವುದು ಕನಸಿನಂತೆ
ಅಲೆ ಬಂದು ಕರೆಯುವುದು
ನಿನ್ನೊಲುಮೆಯರಮನೆಗೆ
ಒಳಗಡಲ ರತ್ನಪುರಿಗೆ
ಅಲೆಯಿಡುವ ಮುತ್ತಿನೊಲೆ
ಕಾಣುವುದು ನಿನ್ನೊಲುಮೆ
ಒಳಗುಡಿಯ ಮೂರ್ತಿ ಮಹಿಮೆ
** ** ** ** ** **
(ಕೆ.ಎಸ್.ನ ಇದ್ದಿದ್ದರೆ, ಇವತ್ತು(Jan 26), ಆವರ ೯೨ನೆಯ ಹುಟ್ಟಿದ ಹಬ್ಬ!)
ಕೆಲವು ಲೇಖನಗಳು -
* ನಿನ್ನ ಪ್ರೀತಿಗೆ ಅದರ ರೀತಿಗೆ - ಮಣಿಕಾಂತ್
* ನಗುವಾಗ ನಕ್ಕು ಅಳುವಾಗ ಅತ್ತು - ಜಾನಕಿ
* ಬತ್ತಿದ ಕೆರೆಯಂಗಳದಲ್ಲಿ - ರವಿ ಬೆಳಗೆರೆ
* ದೀಪ ಸಾಲಿನ ನಡುವೆ