ಭಾವಬಿಂಬ, ತುಳಸಿವನ - ಬೆಳಕು ಕಂಡ ಆ ಕ್ಷಣ

Posted on July 27th, 2007 in ಅನಿಸಿದ್ದು by shreeni

ಪುಸ್ತಕ ಬಿಡುಗಡೆ ಕಾರ್ಯಕ್ರಮದ ಬಗೆಗೊಂದು ಆಪ್ತ, ಆಪರೂಪದ ವರದಿ ಇಲ್ಲಿದೆ.

ಪುಸ್ತಕ, ಲೇಖಕರನ್ನು ಊಹಿಸುತ್ತೀರಾ?

Posted on July 25th, 2007 in ಪುಸ್ತಕಗಳು by sritri

ಭಾರತದ ಮುಖ್ಯ ಭೂಮಿ ದೂರಾಗತೊಡಗಿತು. ಸರಿಯುತ್ತಿದ್ದ ಭಾರತವನ್ನು ಸುಮಾರು ಹೊತ್ತು ಸುಮಾರು ಹೊತ್ತು ವೀಕ್ಷಿಸಿದ ಚಂದ್ರು ನನ್ನತ್ತ ತಿರುಗಿ ನನ್ನ ಕೈಕುಲುಕಿದರು. ನಾನು ಅವರತ್ತ ತಿರುಗಿ ಏಕೆನ್ನುವಂತೆ ನೋಡಿದೆ.

“ಈ ದೇಶವನ್ನು ಒಂದು ಸಾರಿಯಾದರೂ ನಮ್ಮ ಜೀವಿತದಲ್ಲಿ ಬಿಟ್ಟು ಹೋಗುತ್ತಿದ್ದೆವಲ್ಲ” ಎಂದರು.

ನನಗೆ ಭಾರತದ ಭಯಾಜನಕ ಸ್ವರೂಪ ಒಮ್ಮೆಲೆ ಕಣ್ಣಿಗೆ ಕಟ್ಟಿತು. “ದರಿದ್ರ ದೇಶ. ನೋಡಿ ಹೇಗಿದೆ ಆ ಬಡತನ, ಆ ರಾಜಕಾರಣಿಗಳು. ಆ ಭ್ರಷ್ಟಾಚಾರ, ಆ ಜನಸಂಖ್ಯೆ, ಆ ಪರಿಸರ ನಾಶ ಸಾಕಪ್ಪ! ಈ ಶನಿಯನ್ನು ಬಿಟ್ಟು ದೂರ ಹೋಗುತ್ತಿರುವುದಕ್ಕೆ ನನಗೇನೋ ಸಂತೋಷವೇ ಆಗುತ್ತಿದೆ” ಎಂದೆ.

ಇಬ್ಬರೂ ಸೇರಿಕೊಂಡು ಭಾರತವನ್ನು ಮನಸ್ಸು ತೃಪ್ತಿಯಾಗುವರೆಗೂ ಬಯ್ದೆವು. ನಾವು ಇಷ್ಟೊಂದು ದೇಶಪ್ರೇಮವೇ ಇಲ್ಲದವರೆಂದು ಗೊತ್ತಾದುದು ಆಗಲೇ………..”

ಈ ಪುಸ್ತಕವನ್ನು ಈಗಾಗಲೇ ಬಹಳಷ್ಟು ಜನ ಓದಿ ಹಳೆಯದಾಗಿರಬೇಕು. ನನಗೆ ಈಗ ಸಿಕ್ಕಿತು. ಇದರಲ್ಲಿ ಬರುವ ಕೆಲವು ವಾಕ್ಯ, ಸಂಭಾಷಣೆಗಳನ್ನು ಗುಂಪಿನಲ್ಲಿ ಕುಳಿತು ಗಟ್ಟಿಯಾಗಿ ಓದಿ ನಗಬೇಕೆನ್ನಿಸುತ್ತದೆ. ಈ ಪುಸ್ತಕ ಓದುವಾಗ ಆಗಾಗ ನಗಲು ನನಗೆ ಕನಿಷ್ಟ ಒಂದೆರಡು ನಿಮಿಷಗಳು ಬೇಕಾಗುವುದರಿಂದ ಮುಗಿಸುವುದು ಬಹಳ ನಿಧಾನವಾಗಬಹುದು. ಅಷ್ಟರಲ್ಲಿ ಈ ಪುಸ್ತಕ ಯಾವುದಿರಬಹುದೆಂದು ಊಹಿಸುತ್ತೀರಾ? ಒಂದು ಸುಳಿವು - ಇದು ತಿಳಿಹಾಸ್ಯದ ಶೈಲಿಯಲ್ಲಿರುವ ಒಂದು ಪ್ರವಾಸ ಕಥನ.

ಉತ್ತರಿಸುವವರೂ ಉತ್ತರಿಸದವರೂ ಇಲ್ಲಿ ಸರಿ ಸಮಾನರು. ಯಾಕೆಂದರೆ ಯಾರಿಗೂ ಬಹುಮಾನವಿಲ್ಲ! yahoo2

ಗಾನಜೀವನೆ - ಡಿವಿಜಿ

Posted on July 23rd, 2007 in ಕವಿ-ಕಾವ್ಯ by sritri

ಕವಿ - ಡಿವಿಜಿ -ಅಂತಃಪುರ ಗೀತೆಗಳು
ಗಾಯಕಿ: ಅಶ್ವಿನಿ
ಸಂಗೀತ - ವಿಶ್ವೇಶ್ ಭಟ್
ಆಲ್ಬಮ್ - ಘಮ ಘಮ

ಹಾಡು ಕೇಳಿ

ಆವ ರಾಗವ ಪಾಡುವೇ - ಓ ಚೆಲುವೇ
ಎನ್ನೊಲವೇ ಬಾಳ್ಗೆಲವೇ - ನೀನಾವ - ರಾಗವ ಪಾಡುವೇ|| ಪ||

ಆವರಾಗವ ಪಾಡಿ - ಆವ ಮಾಟವ ಮಾಡಿ |
ಆವ ಜೀವವ ಕಾಡಿ - ನೀನಿಂತು ನಲಿಯುವೆ || ಅನು ಪಲ್ಲವಿ||

ಕಲಹಂಸೆ ಲಲಿತಸ್ವರೆ - ಓ ಮನೋಹರೆ|
ವಿಲಸಿತ ವಿವರಾಧರೇ - ಓ ಚದುರೇ ||
ಮನಸಿನ ಗುಹೆಯಲಿ - ಮಲಗಿರ್ಪ ದನಿಗಳ |
ಹೊನಲಾಗಿ ಹರಿಸಿ ಜಾ-ಲಿಸುವೆ ನಮ್ಮಸುಗಳ ||

ಮಧುರ ಗೀತಾಯುಧದೆ ನಮ್ಮಯ |
ಚದುರ ಚೆನ್ನಿಗ ಕೇಶವೇಶನ ||
ಹೃದಯರಾಜ್ಯವ ಸೂರೆಗೊಳ್ಳುವ |
ಮದನಬಲ ಪಟ್ಟಾಧಿಕಾರಿಣಿ ||

***

Next Page »